Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:17 - ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆ ಆಯ್ಕುನ್ ಜೆಜುನ್ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಅರಾಮ್ ನಸಲ್ಯಾಕ್ನಿ ವಗ್ದುಳ್ಯಾಚಿ ಗರಜ್ ರ್‍ಹಾತಾ. ಮಿಯಾ ಬರ್‍ಯಾ ಲೊಕಾಕ್ನಿ ನ್ಹಯ್, ಪಾಪಿ ಲೊಕಾಕ್ನಿ ಬಲ್ವುಕ್ ಮನುನ್ ಯೆಲಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:17
21 ತಿಳಿವುಗಳ ಹೋಲಿಕೆ  

“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು