Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:18 - ಕನ್ನಡ ಸತ್ಯವೇದವು C.L. Bible (BSI)

18 ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸವಾಗಿದ್ದರು. ಅವರು ಆತನ ಬಳಿಗೆ ಬಂದು - ಯೋಹಾನನ ಶಿಷ್ಯರೂ ಫರಿಸಾಯರ ಶಿಷ್ಯರೂ ಉಪವಾಸಮಾಡುತ್ತಾರಲ್ಲ? ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುಂವಾವಾಚಿ ಶಿಸಾ, ಅನಿ ಫಾರಿಜೆವ್ ಉಪಾಸ್ ಕರಿತ್. ಥೈಹೊತ್ತ್ಯಾ ಉಲ್ಲ್ಯಾ ಲೊಕಾನಿ, ಜೆಜುಕ್ಡೆ ಯೆವ್ನ್ “ಜುಂವಾವಾಚಿ ಶಿಸಾ ಅನಿ ಫಾರಿಜೆವಾಂಚಿ ಶಿಸಾ ಉಪಾಸ್ ಕರ್‍ತ್ಯಾತ್, ಖರೆ, ತುಜಿ ಶಿಸಾ ಕಶ್ಯಾಕ್ ಉಪಾಸ್ ಕರಿನ್ಯಾತ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:18
8 ತಿಳಿವುಗಳ ಹೋಲಿಕೆ  

ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು