Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:2 - ಕನ್ನಡ ಸತ್ಯವೇದವು C.L. Bible (BSI)

2 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಎವ್ಡಿ ಲೊಕಾ ಗೊಳಾ ಹೊಲ್ಲಿಕಿ ಮಟ್ಲ್ಯಾರ್, ತ್ಯಾ ಘರಾಚ್ಯಾ ದಾರಾತ್ ಪಾಯ್ ಥವ್ಕ್ ಸೈತ್ ಜಾಗೊ ನತ್ತೊ. ಜೆಜು ಥೈ ಗೊಳಾಹೊಲ್ಲ್ಯಾ ಲೊಕಾಕ್ನಿ, ದೆವಾಚ್ಯಾ ಗೊಸ್ಟಿಯಾ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:2
20 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ.


ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು.


ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:


ಆಗ ಯೇಸು ಇಂತೆಂದು ಪ್ರಬೋಧಿಸಿದರು.


ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು