Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:24 - ಕನ್ನಡ ಸತ್ಯವೇದವು C.L. Bible (BSI)

24 ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಫರಿಸಾಯರು ಆತನನ್ನು - ನೋಡು, ಇವರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತಾರೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಫಾರಿಜೆವಾನಿ ಬಗಟ್ಲ್ಯಾನಿ ಅನಿ “ತುಜಿ ಶಿಸಾ ಅಶೆ ಕರ್‍ತಲೆ, ಅಮ್ಚ್ಯಾ ಖಾಯ್ದ್ಯಾಚ್ಯಾ ಪರ್‍ಕಾರ್ ಚುಕ್ ನ್ಹಯ್ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:24
18 ತಿಳಿವುಗಳ ಹೋಲಿಕೆ  

ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.


ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು