Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:10 - ಕನ್ನಡ ಸತ್ಯವೇದವು C.L. Bible (BSI)

10 ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಆತನನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್, ಸುಮಾರ್ ಅರಾಮ್ ನತ್ತ್ಯಾ ಲೊಕಾಕ್ನಿ ಗುನ್ ಕರಲ್ಲ್ಯಾನ್. ತಸೆ ಮನುನ್, ಹರ್‍ಎಕ್ ಅರಾಮ್ ನತ್ತೊ ಮಾನುಸ್, ಲೊಕಾಕ್ನಿ ಢಕ್ಲುನ್ಗೆತ್, ಜೆಜುಕ್ ಅಪಡ್ತಲೊ ಅವ್ಕಾಸ್ ಹುಡ್ಕುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:10
18 ತಿಳಿವುಗಳ ಹೋಲಿಕೆ  

ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.


ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.


ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು.


ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.


ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.


ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು