Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:11 - ಕನ್ನಡ ಸತ್ಯವೇದವು C.L. Bible (BSI)

11 ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ದೆವ್ವಗಳು ಆತನನ್ನು ಕಂಡಾಗೆಲ್ಲಾ ಆತನ ಪಾದಕ್ಕೆ ಬಿದ್ದು - ನೀನು ದೇವಕುಮಾರನೆಂದು ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಗಿರೊಲಾಗಲ್ಲಿ ಲೊಕಾಬಿ ಥೈ ಹೊತ್ತಿ. ತೆನಿ ಜೆಜುಕ್ ಬಗುನ್, ತೆಚ್ಯಾ ಇದ್ರಾಕ್ ಪಡುನ್ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:11
14 ತಿಳಿವುಗಳ ಹೋಲಿಕೆ  

ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


“ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು