Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:14 - ಕನ್ನಡ ಸತ್ಯವೇದವು C.L. Bible (BSI)

14 “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಬಾರಾ ಜಾನಾಕ್ನಿ ಎಚುನ್ ಕಾಡ್ಲ್ಯಾನ್, ತೆಂಕಾ “ಅಪೊಸ್ತಲಾ” ಮನುನ್ ನಾವ್ ದಿಲ್ಯಾನ್. ಅನಿ “ಮಾಜ್ಯಾ ವಾಂಗ್ಡಾ ರ್‍ಹಾವ್ಕ್, ಮನುನ್ ಮಿಯಾ ತುಮ್ಕಾ ಎಚುನ್ ಕಾಡ್ಲಾ, ಸಗ್ಳ್ಯಾಕ್ಡೆ ದೆವಾಚಿ ಬರಿ ಖಬರ್ ಸಾಂಗುಕ್ ಮಿಯಾ ತುಮ್ಕಾ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:14
11 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.


ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ :


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು