Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:18 - ಕನ್ನಡ ಸತ್ಯವೇದವು C.L. Bible (BSI)

18 ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಉಳಿದವರು ಯಾರಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಂದ್ರು, ಫಿಲಿಪ್, ಬಾರ್‍ತೊಲೊಮೆವ್, ಮಾತೆವ್, ಥೊಮಸ್, ಅಲ್ಫೆವಾಚೊ ಲೆಕ್ ಜಾಕೊಬ್ , ತಾದ್ದೆವ್,ದೆಶ್‍ಭಕ್ತ್ ಸಿಮಾವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:18
27 ತಿಳಿವುಗಳ ಹೋಲಿಕೆ  

ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.


ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,


ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.


ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.


ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).


ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು