Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:2 - ಕನ್ನಡ ಸತ್ಯವೇದವು C.L. Bible (BSI)

2 ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಹೊತ್ತಿ ಜುದೆವಾಂಚಿ ಉಲ್ಲಿ ಮಾನ್ಸಾ, ಜೆಜು ತ್ಯಾ ಅಕಡಲ್ಲ್ಯಾ ಹಾತಾಚ್ಯಾ ಮಾನ್ಸಾಕ್ ಸಬ್ಬತಾಚ್ಯಾ ದಿಸಿ, ಗುನ್ ಕರ್‍ತಾ ಕಾಯ್ ಬಗುವಾ? ಅನಿ ಗುನ್ ಕರ್‍ಲ್ಯಾನ್ ತರ್, ತೆಚೆ ವರ್‍ತಿ ಎಕ್ ಝುಟೆ ಅಪ್ವಾದ್ ಘಾಲುವಾ, ಮನುನ್ ರಾಕುನ್ಗೆತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:2
12 ತಿಳಿವುಗಳ ಹೋಲಿಕೆ  

ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.


ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?" ಎಂದು ಯೇಸುವನ್ನು ಕೇಳಿದರು.


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು