Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:24 - ಕನ್ನಡ ಸತ್ಯವೇದವು C.L. Bible (BSI)

24 ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕ್ ರಾಜ್ ದೊನ್ ತಾಂಡೆ ಹೊವ್ನ್ ಎಕಾಮೆಕಾಚ್ಯಾ ವಿರೊದ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೊ ರಾಜ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:24
15 ತಿಳಿವುಗಳ ಹೋಲಿಕೆ  

ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?


ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು