Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:27 - ಕನ್ನಡ ಸತ್ಯವೇದವು C.L. Bible (BSI)

27 ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಎಕ್ ಘಟ್ಮುಟ್ ಮಾನ್ಸಾಚ್ಯಾ ಘರಾತ್ಲಿ ಸಾಮಾನಾ, ಚೊರುಚೆ ಮಟ್ಲ್ಯಾರ್, ಅದ್ದಿ ತ್ಯಾ ಮಾನ್ಸಾಕ್, ಘಟ್ ಭಾಂದುಕ್ ಪಾಜೆ, ತನ್ನಾ ತ್ಯಾ ಮಾನ್ಸಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:27
17 ತಿಳಿವುಗಳ ಹೋಲಿಕೆ  

“ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು