Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:35 - ಕನ್ನಡ ಸತ್ಯವೇದವು C.L. Bible (BSI)

35 ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರ ಚಿತ್ತಕ್ಕನುಸಾರವಾಗಿ ನಡೆಯುವ ಜನರೇ ನನ್ನ ಸಹೋದರರು, ಸಹೋದರಿಯರು ಮತ್ತು ತಾಯಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ದೆವಾಚ್ಯಾ ಯವ್ಜನಿ ಸರ್ಕೆ ಕರ್‍ತಲಿ ಲೊಕಾಚ್, ಮಾಜಿ ಬಾಯ್ ಅನಿ ಮಾಜೆ ಭಾವ್‍ ಭೆನಿಯಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:35
8 ತಿಳಿವುಗಳ ಹೋಲಿಕೆ  

ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು