Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:5 - ಕನ್ನಡ ಸತ್ಯವೇದವು C.L. Bible (BSI)

5 ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ರಾಗಾನ್, ಜೆಜುನ್ ಸಗ್ಳ್ಯಾ ಲೊಕಾಕ್ನಿ ಎಗ್ದಾ ಅಪ್ನಾಚೆ ಡೊಳೆ ಫಿರ್ವುನ್ ಬಗಟ್ಲ್ಯಾನ್. ತೆಂಚೆ ಮಂಡ್‍ಪಾನ್ ಬಗುನ್ ತೆಕಾ ಬೆಜಾರ್ ಹೊಲೊ. ತನ್ನಾ ಜೆಜುನ್ ತ್ಯಾ “ಮಾನ್ಸಾಕ್ ತುಜೊ ಹಾತ್ ಲಾಂಬ್ ಸೊಡ್” ಮಟ್ಲ್ಯಾನ್. ತೆನಿ ಹಾತ್ ಲಾಂಬ್ ಸೊಡ್ಲ್ಯಾನ್, ತನ್ನಾಚ್ ತೆಚೊ ಹಾತ್ ಬರೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:5
29 ತಿಳಿವುಗಳ ಹೋಲಿಕೆ  

ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.


ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.


ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ಈ ದುಷ್ಕೃತ್ಯದ ನಿಮಿತ್ತ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು


“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.


ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು