Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:6 - ಕನ್ನಡ ಸತ್ಯವೇದವು C.L. Bible (BSI)

6 ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:6
10 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು