Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:9 - ಕನ್ನಡ ಸತ್ಯವೇದವು C.L. Bible (BSI)

9 ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮುಂದರಾಚ್ಯಾ ದಂಡೆಕ್ ಜೆಜು ಲೊಕಾಕ್ನಿ ಸಿಕ್ವುತಲೆ ಜೆಜು ಹಿ ಲೊಕಾ ಅಪ್ನಾಚ್ಯಾ ಆಂಗಾರ್ ಪಡುನ್ ಮಾಕಾ ಹಿಚಕ್ತಿಲ್, ಮನುನ್ ಅಪ್ನಾಚ್ಯಾ ಶಿಸಾಕ್ನಿ, ಅಪ್ನಾಕ್ ಬಸುಕ್ ಎಕ್ ಢೊನ್ ಹಾನುನ್, ತಯಾರ್ ಕರುನ್ ಥವ್ಕ್ ಲಾವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:9
9 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.


ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.


ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.


ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.


ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು