Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:12 - ಕನ್ನಡ ಸತ್ಯವೇದವು C.L. Bible (BSI)

12 ‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಚ್ಯಾ ಸಾಟ್ನಿ “ತೆನಿ ಬಗಟ್ಲ್ಯಾರ್ಬಿ, ತೆಂಕಾ ದಿಸಿನಾ, ತೆನಿ ಅಯಿಕ್‍ಲ್ಯಾರ್ಬಿ, ತೆಂಕಾ ಕಳಿನಾ, ತೆನಿ ಅಶೆ ಕರ್ಲ್ಯಾರ್, ತೆನಿ ದೆವಾಕ್ಡೆ ಪರ್ತುನ್ ಯೆತಿಲ್, ಅನಿ ತೊ ತೆಂಕಾ ಮಾಪ್ ಕರಿಲ್ ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:12
18 ತಿಳಿವುಗಳ ಹೋಲಿಕೆ  

ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು