Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:2 - ಕನ್ನಡ ಸತ್ಯವೇದವು C.L. Bible (BSI)

2 ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಪಾನಿಯಾಚ್ಯಾ ದಂಡೆ ಪತರ್ ಲೊಕಾ ಜಿಮ್ನಿರ್ ಬಸಲ್ಲಿ. ತನ್ನಾ ಜೆಜುನ್ ಕಾನಿಯಾಂಚ್ಯಾ ವೈನಾಚ್, ಸುಮಾರ್ ವಿಶಯ್ ಶಿಕ್ವುಲ್ಯಾನ್. ಶಿಕ್ವುತಾನಾ ಜೆಜುನ್ ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:2
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?


ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.


ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:


ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,


ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


ಅಷ್ಟರಲ್ಲಿ ಪ್ರಧಾನಯಾಜಕನು ಯೇಸು ಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು.


“ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ.


ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು