Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:24 - ಕನ್ನಡ ಸತ್ಯವೇದವು C.L. Bible (BSI)

24 “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಆತನು ಅವರಿಗೆ - ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ಇನ್ನೂ ಕೂಡಿಸಿ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತೆನಿ “ತುಮಿ ಆಯ್ಕಲ್ಯಾಸಿ ತೆಕಾ ಧ್ಯಾನ್ ದಿವಾ! ತುಮಿ ದುಸ್ರ್ಯಾಕ್ನಿ ಖಲ್ಯಾ ಖಾಯ್ದ್ಯಾನ್ ನ್ಯಾಯ್ ಕರ್ತ್ಯಾಶಿ, ತ್ಯಾಚ್ ಖಾಯ್ದ್ಯಾನ್ ದೆವ್ ತುಮ್ಕಾ ನ್ಯಾಯ್ ಕರ್‍ತಾ-ಅನಿ ತೆಚೆನ್ಕಿ ಕಟಿನ್ ಮಾಪಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:24
16 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಮನಮುಟ್ಟಿ ಇದನ್ನು ಗಮನಿಸಿರಿ : ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿ. ಜೆರುಸಲೇಮಿನ ಬಾಗಿಲುಗಳಲ್ಲಿ ಅದನ್ನು ತರಲೇಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು