Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:28 - ಕನ್ನಡ ಸತ್ಯವೇದವು C.L. Bible (BSI)

28 ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಭೂವಿುಯು ಮೊದಲು ಗರಿಯನ್ನೂ, ಆಮೇಲೆ ಹೊಡೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಭೂಮಿಯು ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೇ ತಾನೇ ಉತ್ಪತ್ತಿಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾಟಿ ಅಪ್ಲ್ಯಾ ಅಪ್ನಿಚ್ ತ್ಯಾ ಭ್ಹಿಂಯಾಕ್ ಉಗ್ವುನ್ ಪಿಕ್ಕ್ ದಿ ಸರ್ಕೆ ಕರ್‍ತಾ, ಅದ್ದಿ ಪಾಲ್ವಿ, ಮಾನಾ ಕನ್ಸಾ,ಮಾನಾ ದಾನ್ಯಾನಿ ಭರಲ್ಲಿ ಕನ್ಸಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:28
19 ತಿಳಿವುಗಳ ಹೋಲಿಕೆ  

ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ.


ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು