Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:32 - ಕನ್ನಡ ಸತ್ಯವೇದವು C.L. Bible (BSI)

32 ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡ ದೊಡ್ಡ ಕೊಂಬೆಗಳನ್ನು ಬಿಡುವದರಿಂದ ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅದರ ನೆರಳಿನಲ್ಲಿ ವಾಸಮಾಡುವದಕ್ಕಾಗುತ್ತದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಉಲ್ಲೊ ಎಳ್ ಹೊಲ್ಲ್ಯಾ ಮಾನಾ, ತೆ ವಾಡ್ತಾ, ಅನಿ ಸಗ್ಳ್ಯಾ ಝಾಡಾಂಚ್ಯಾನ್ಕಿ ಮೊಟೆ ಹೊತಾ. ತೆಚ್ಯೆ ಟಾಳಿಯಾ ಎವ್ಡೆ ಮೊಟೆ ಹೊತ್ಯಾತ್ ಕಿ, ಮಳ್ಬಾತ್ ಹುಡ್ತಲಿ ಫಾಂಕ್ರಾ ಯೆವ್ನ್ ತೆಚ್ಯಾ ಸಾವ್ಳಿಕ್ ಘಂಟೆ ಭಾಂದ್ತ್ಯಾತ್.”ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:32
15 ತಿಳಿವುಗಳ ಹೋಲಿಕೆ  

ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”


ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು.


ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು