Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:39 - ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜುನ್ ಉಟುನ್, ವಾರ್ಯಾಕ್ ಆಜ್ಞಾ ಕರುನ್ “ಗಪ್ ರ್‍ಹಾಮ್!” ಮಟ್ಲ್ಯಾನ್. ಅನಿ ಸಮುಂದರಾಚ್ಯಾ ಲ್ಹಾಟಾಕ್ನಿ “ಹಾಲುನಕಾಸಿ!” ಮಟ್ಲ್ಯಾನ್. ತನ್ನಾ ತೊ ಮೊಟೊ ವಾರೊ ಬಂದ್ ಹೊಲೊ. ಅನಿ ಸಗ್ಳೆ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:39
21 ತಿಳಿವುಗಳ ಹೋಲಿಕೆ  

ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II


ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.


ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.


ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.


ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು