Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:8 - ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಹುಟ್ಟಿ ಬೆಳೆಯುತ್ತಾ ಬಂದು ಒಂದು ಮೂವತ್ತರಷ್ಟು, ಒಂದು ಅರುವತ್ತರಷ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಭ್ಹಿಂಯ್, ಬರ್‍ಯಾ ಮಾಟಿತ್ ಪಡ್ಲೆ, ತೆ ಉಗಾವ್ಲೆ, ಝಾಡಾ ಮೊಟಿ ಹೊವ್ನ್ ಫಳ್ ದಿಲ್ಯಾನಿ; ಉಲ್ಲ್ಯಾನ್ ತಿಸ್ ದಾನೆ, ಉಲ್ಲ್ಯಾನಿ ಸಾಟ್ , ಅನಿ ಉಲ್ಲ್ಯಾನ್ ಸೆಂಬರಾಕ್ ಸೆಂಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:8
21 ತಿಳಿವುಗಳ ಹೋಲಿಕೆ  

“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ.


ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು.


ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು