ಮಾರ್ಕ 5:29 - ಕನ್ನಡ ಸತ್ಯವೇದವು C.L. Bible (BSI)29 ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆನಿ, ಜೆಜುಚ್ಯಾ ಫಾಳ್‍ಯಾಕ್ನಿ ಹಾತ್‍ಲಾವಲ್ಲ್ಯಾ ತನ್ನಾಚ್, ತಿಚೆ, ರಗಾತ್ ಜಾತಲೆ, ಬಂದ್‍ಹೊಲೆ. ತಿಕಾ, ಅಪ್ನಿ ಆರಾಮ್ ಹೊವ್ನ್, ಹ್ಯಾ ಕಸ್ಟಾತ್ನಾ ಭಾಯ್ರ್ ಪಡ್ಲೊ, ಮನುನ್ ಕಳ್ಳೆ. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.