Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:34 - ಕನ್ನಡ ಸತ್ಯವೇದವು C.L. Bible (BSI)

34 ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ “ಬಾಯಿ! ತುಜ್ಯಾ ವಿಶ್ವಾಸಾನ್ ತಿಯಾ ಅರಾಮ್ ಹೊಲೆ, ಸಮಾದಾನಾನ್ ಜಾ ಅನಿ ತುಜೊ ಕಸ್ಟ್ ಸರ್ಲೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:34
19 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.


ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.


ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಎಲೀಷನು, “ಸಮಾಧಾನದಿಂದ ಹೋಗು,” ಎಂದು ಉತ್ತರಕೊಟ್ಟನು. ಅವನು ಹೊರಟುಹೋದನು.


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.


ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.


ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು.


ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.


ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು