Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:35 - ಕನ್ನಡ ಸತ್ಯವೇದವು C.L. Bible (BSI)

35 ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು - ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವದು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅಶೆ ಜೆಜು ಬೊಲುನ್ಗೆತ್ ರಾತಾನಾ ಜಾಯಿರಾಚ್ಯಾ ಘರಾಕ್ನಾ ಥೊಡ್ಯಾ ಲೊಕಾನಿ ಯೆವ್ನ್ ಜಾಯಿರಾಕ್ “ಅತ್ತಾ ತುಜಿ ಲೆಕ್ ಮರ್ಲಿ ಅನಿ ತಿಯಾ ಗುರುಜಿಕ್ ತರಾಸ್ ಕರುಕ್ ನಕ್ಕೊ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:35
13 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.


ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.


ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.


ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.


ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.


ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು