Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:40 - ಕನ್ನಡ ಸತ್ಯವೇದವು C.L. Bible (BSI)

40 ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರಕೊಂಡು ಹೋಗಿ ಅವಳ ಕೈಹಿಡಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜು ಅಶೆ ಸಾಂಗ್ತಲೆ ಆಯ್ಕುನ್; ಲೊಕಾ ಜೆಜುಕ್ ಬಗುನ್ ಹಾಸುಕ್ ಲಾಗ್ಲಿ. ಜೆಜುನ್ ಥೈ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ಭಾಯ್ರ್ ಧಾಡ್ಲ್ಲ್ಯಾನ್ ಅನಿ ತ್ಯಾ ಚೆಡ್ವಾಚ್ಯಾ ಬಾಯ್-ಬಾಬಾಕ್ ಅನಿ ಅಪ್ಲ್ಯಾ ಶಿಸಾಕ್ನಿ ಘೆವ್ನ್, ತ್ಯಾ ಚೆಡ್ವಾಕ್ ನಿಜ್ವಲ್ಲ್ಯಾ ಖೊಲಿತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:40
14 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.


ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು