Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:41 - ಕನ್ನಡ ಸತ್ಯವೇದವು C.L. Bible (BSI)

41 ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಥೈ ಜೆಜು ಫಿಡೆ ಗೆಲೊ ಅನಿ ತ್ಯಾ ಚೆಡ್ವಾಚೊ ಹಾತ್ ಧರುನ್ “ತಾಲಿಥಾಕುಮ್” ಮಟ್ಲ್ಯಾನ್ ತಸೆ ಮಟ್ಲ್ಯಾರ್ “ಚೆಡ್ವಾ ಮಿಯಾ ತುಕಾ ಉಟ್ ಮನುಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:41
13 ತಿಳಿವುಗಳ ಹೋಲಿಕೆ  

ಆಕೆ ಅವರೆಲ್ಲರನ್ನು ಸತ್ಕರಿಸಿದಳು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.


ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು