Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:7 - ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-8 ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಜೆಜು ಪರಮೊನ್ನತ್ ದೆವಾಚ್ಯಾ ಲೆಕಾ! ತಿಯಾ ಮಾಜ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ತಿಯಾ, ಮಾಕಾ ಶಿಕ್ಷಾ ದಿವ್‍ನಕೊ, ಮನುನ್ ದೆವಾಚ್ಯಾ ನಾಂವಾನ್, ಮಿಯಾ ತುಜ್ಯಾಕ್ಡೆ ಮಾಗ್ತಾ!” ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:7
29 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,


ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು