Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:16 - ಕನ್ನಡ ಸತ್ಯವೇದವು C.L. Bible (BSI)

16 ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆರೊದಾನ್ ಹೆ ಆಯ್ಕಲ್ಲ್ಯಾ ತನ್ನಾ “ತೊ ಬಾಲ್ತಿಮ್‍ ದಿತಲೊ ಜುವಾಂವ್! ಮಿಯಾ ತೆಚೆ ಚಂಡ್ ತೊಡುಕ್ ಲಾವಲ್ಲೊ, ಖರೆ ತೊ ಅತ್ತಾ ಝಿತ್ತೊ ಹೊವ್ನ್ ಯೆಲಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:16
8 ತಿಳಿವುಗಳ ಹೋಲಿಕೆ  

ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು