Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:17 - ಕನ್ನಡ ಸತ್ಯವೇದವು C.L. Bible (BSI)

17 ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆರೊದಾನ್ ಅಪ್ನಿಚ್ ಜುವಾಂವಾಕ್ ಧರುನ್ ಬಂದಿಖಾನ್ಯಾತ್ ಘಾಲುಕ್ ಸಾಂಗಟಲ್ಲ್ಯಾನ್. ಹೆರೊದಿಯಾಸಾಕ್ ಲಾಗುನ್ ತೆನಿ ಅಶೆ ಕರ್‍ತಲೆ ಪಡ್ಲೆ. ತಿ ಅಪ್ಲ್ಯಾ ಭಾವಾಚಿ-ಫಿಲಿಪ್ಪಾಚಿ ಬಾಯ್ಕೊ! ಜಾಲ್ಯಾರ್‍ಬಿ ತೊ ತಿಚೆಕ್ಡೆ ಲಗಿನ್ ಹೊಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:17
7 ತಿಳಿವುಗಳ ಹೋಲಿಕೆ  

ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.


ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು