Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:24 - ಕನ್ನಡ ಸತ್ಯವೇದವು C.L. Bible (BSI)

24 ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಅವಳು ಹೊರಕ್ಕೆ ಹೋಗಿ - ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು - ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತೆ ಚೆಡು ಅಪ್ಲ್ಯಾ ಬಾಯ್‍ಕ್ಡೆ ಗೆಲೆ ಅನಿ “ಬಾಯ್ ಮಿಯಾ ಕಾಯ್ ಮಾಗುಚೆ?” ಮುನುನ್ ಇಚಾರ್‍ಲಿನ್. ತನ್ನಾ ತಿಚ್ಯಾ ಬಾಯ್ನ್. “ಬಾಲ್ತಿಮ್‍ದಿತಲ್ಯಾ ಜುವಾಂವಾಚೆ ಟಕ್ಲೆ ಮಾಗ್” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:24
14 ತಿಳಿವುಗಳ ಹೋಲಿಕೆ  

‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II


ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.


ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು