Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:31 - ಕನ್ನಡ ಸತ್ಯವೇದವು C.L. Bible (BSI)

31 ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ಮಾತ್ರ ವಿಂಗಡವಾಗಿ ಅಡವಿಗೆ ಬಂದು ಸ್ವಲ್ಪ ದಣುವಾರಿಸಿಕೊಳ್ಳಿರಿ ಎಂದು ಹೇಳಿದನು. ಯಾಕಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದದರಿಂದ ಅವರಿಗೆ ಊಟಮಾಡುವದಕ್ಕೂ ಅವಕಾಶ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಲೈ ಲೊಕಾ ಯೆವ್ನ್ಗೆತ್-ಜಾವ್ನ್ಗೆತ್ ಹೊತ್ತಿ ಜೆಜುಕ್ ಅನಿ ತೆಚ್ಯಾ ಶಿಸಾಕ್ನಿ ಜೆವಾನ್ ಕರುಕ್ ಸೈತ್ ಎಳ್ ನತ್ತೊ. ತಸೆ ಮನುನ್ ಜೆಜುನ್ ತೆಂಕಾ “ಚಲಾ ಅಮ್ಚ್ಯಾ ಎವ್ಡ್ಯಾಕ್ ಅಮಿ ಎಕ್ ಲೊಕಾನಸಲ್ಲ್ಯಾ ಜಾಗ್ಯಾಕ್ ಜಾಂವಾ, ತನ್ನಾ ತುಮ್ಕಾ ಉಲ್ಲೆ ಆರಾಮ್ ಘೆವ್ಕ್ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:31
5 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.


ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.


ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು