Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:46 - ಕನ್ನಡ ಸತ್ಯವೇದವು C.L. Bible (BSI)

46 ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನು ಜನರಿಗೆ ಅಪ್ಪಣೆಕೊಟ್ಟನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಮಾಗ್ನಿ ಕರುಕ್ ಮಡ್ಡಿ ವರ್‍ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:46
9 ತಿಳಿವುಗಳ ಹೋಲಿಕೆ  

ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು