Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:6 - ಕನ್ನಡ ಸತ್ಯವೇದವು C.L. Bible (BSI)

6 ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಲೊಕಾಕ್ನಿ ವಿಶ್ವಾಸ್ ನಸಲ್ಲೆ ಬಗುನ್ ಜೆಜು ಅಜಾಪ್ ಹೊಲೊ. ತನ್ನಾ ಜೆಜು ಅಜು-ಬಾಜುಚ್ಯಾ ಗಾಂವಾತ್ನಿ ಗೆಲೊ ಅನಿ ಸಿಕ್ವುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:6
12 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.


ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.


ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು