Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:19 - ಕನ್ನಡ ಸತ್ಯವೇದವು C.L. Bible (BSI)

19 ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುವದರಿಂದ ಅವನನ್ನು ಹೊಲೆಮಾಡಲಾರದೆಂದು ನಿಮಗೆ ತಿಳಿಯಲಿಲ್ಲವೋ ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ತಿನ್ನುವ ಪದಾರ್ಥಗಳೆಲ್ಲಾ ಶುದ್ಧವೆಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆವಾನ್, ಖಾತಲೆ ಖಾನ್ ಮಾನ್ಸಾಚ್ಯಾ ಕಾಳ್ಜಾತ್ ಜಾಯ್ನಾ, ಪೊಟಾತ್ ಜಾತಾ. ಅನಿ ಮಾನಾ ಭಾಯ್ರ್ ಜಾತಾ.ಮಟ್ಲ್ಯಾನ್. ಅಶೆ, ಸಗ್ಳೆ ಖಾತಲೆ ಮನುನ್ ಅಸಲ್ಲೆ ಬರೆಚ್ ಮನುನ್ ಜೆಜುನ್ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:19
9 ತಿಳಿವುಗಳ ಹೋಲಿಕೆ  

ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.


ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.


ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು