Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:20 - ಕನ್ನಡ ಸತ್ಯವೇದವು C.L. Bible (BSI)

20 ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಇನ್ನೂ - ಮನುಷ್ಯನೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ಫಿಡೆ ಜೆಜುನ್ “ಎಕ್ ಮಾನ್ಸಾಚ್ಯಾ ಭುತ್ತುರ್ನಾ ಜೆ ಕಾಯ್ ಭಾಯ್ರ್ ಯೆತಾ, ತೆ, ತೆಕಾ ಮ್ಹೆಳ್ವುತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:20
12 ತಿಳಿವುಗಳ ಹೋಲಿಕೆ  

ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II


ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.


ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು