Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:26 - ಕನ್ನಡ ಸತ್ಯವೇದವು C.L. Bible (BSI)

26 ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಆ ಹೆಂಗಸು ಅನ್ಯಮತದವಳೂ ಸುರೋಪೊಯಿನಿಕ್ಯರವಳೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಿ ಎಕ್ “ಗ್ರಿಕ್” ಬಾಯ್ಕೊಮನುಸ್, ಸಿರಿಯಾಚ್ಯಾ ಪೊಯಿನಿಕ್ಯಾ ಮನ್ತಲ್ಯಾ ಜಾಗ್ಯಾರ್ ಜಲಮಲ್ಲಿ, ತೆನಿ ಅಪ್ನಾಚ್ಯಾ ಲೆಕಿಕ್ ಲಾಗಲ್ಲೊ ಗಿರೊ ಕಾಡ್ ಮನುನ್ ಜೆಜುಕ್ಡೆ ಮಾಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:26
7 ತಿಳಿವುಗಳ ಹೋಲಿಕೆ  

ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು


ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು