Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:27 - ಕನ್ನಡ ಸತ್ಯವೇದವು C.L. Bible (BSI)

27 ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆಯು ತನ್ನ ಮಗಳ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ ಆತನು ಆಕೆಗೆ - ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜೆಜುನ್ “ಪೊರಾಕ್ನಿ ದಿತಲಿ ಭಾಕ್ರಿ ಕುತ್ರ್ಯಾಕ್ನಿ ತಾಕ್ತಲೆ ಸಮಾ ನ್ಹಯ್, ಅದ್ದಿ ಪೊರಾ ಖಾಂವ್ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:27
8 ತಿಳಿವುಗಳ ಹೋಲಿಕೆ  

‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.


ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು