Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:3 - ಕನ್ನಡ ಸತ್ಯವೇದವು C.L. Bible (BSI)

3 ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಫಾರಿಜೆವ್‍ ಅನಿ ಜುದೆವ್ ಧರ್ಮಾಚಿ ಲೊಕಾ ತೆಂಚ್ಯಾ ಅದ್ಲ್ಯಾ ಲೊಕಾಂಚ್ಯಾ ಪದ್ದತಿ ಪರ್‍ಕಾರ್ ಹಾತ್ ಧುಯ್ನಾಸ್ತಾನಾ ಜೆವಾನ್ ಕರಿನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:3
10 ತಿಳಿವುಗಳ ಹೋಲಿಕೆ  

ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


“ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು.


ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು.


ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು