Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:37 - ಕನ್ನಡ ಸತ್ಯವೇದವು C.L. Bible (BSI)

37 ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಹೆ ಸಗ್ಳೆ ಆಯ್ಕಲ್ಲಿ ಲೊಕಾ ಲೈ ಅಜಾಪ್ ಹೊಲಿ ಹ್ಯೊ ಸಗ್ಳೆ ಬರೆ ಕರ್‍ತಾ! ಕಿಂವ್ಡ್ಯಾನಿ ಆಯ್ಕಿ ಸರ್ಕೆ ಕರ್‍ತಾ, ಮುಕ್ಕ್ಯಾನಿ ಬೊಲಿ ಸರ್ಕೆ ಕರ್‍ತಾ ಮನುನ್ ಮನುಕ್ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:37
16 ತಿಳಿವುಗಳ ಹೋಲಿಕೆ  

ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.


ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.


ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II


ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.


ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.


ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು