Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:12 - ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಉಸ್ಕಾರ್ಲೊ ಅನಿ “ಹ್ಯಾ ಕಾಲಾಚಿ ಲೊಕಾ ವಳಕ್ ಕಶ್ಯಾಕ್ ಇಚಾರ್‍ತ್ಯಾತ್? ಮಿಯಾ ಖರೆಚ್ ಸಾಂಗ್ತಾ ಹ್ಯಾ ಲೊಕಾಕ್ನಿ ಘುರುತ್ ಕರುನ್ ದಾಕ್ವುಕ್ ಹೊಯ್ನಾ,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:12
15 ತಿಳಿವುಗಳ ಹೋಲಿಕೆ  

ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು.


ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು