Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:13 - ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಯೇಸು ಫರಿಸಾಯರ ಬಳಿಯಿಂದ ಹೊರಟು ದೋಣಿಯಲ್ಲಿ ಸರೋವರದ ಆಚೆಯ ದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ತೊ ಥೈತ್ನಾ ಢೊನಿತ್ ಚಡುನ್ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:13
15 ತಿಳಿವುಗಳ ಹೋಲಿಕೆ  

ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.


ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು