Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:15 - ಕನ್ನಡ ಸತ್ಯವೇದವು C.L. Bible (BSI)

15 ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ ತೆಂಕಾ ಫಾರಿಜೆವಾಂಚ್ಯಾ ಅನಿ ಹೆರೊದಿಚ್ಯಾ ಲೊಕಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ ರ್‍ಹಾವಾ, ಮನುನ್ ಉಶಾರ್ಕಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:15
21 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.


“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.


ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.


ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು