Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:17 - ಕನ್ನಡ ಸತ್ಯವೇದವು C.L. Bible (BSI)

17 ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಅದನ್ನು ತಿಳಿದು - ರೊಟ್ಟಿಯಿಲ್ಲವಲ್ಲಾ ಎಂದು ಮಾತಾಡಿಕೊಳ್ಳುವದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ತಿಳುವಳಿಕೆ ಬರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ಬೊಲ್ತಲೆ ಜೆಜುಕ್ ಕಳ್ಳೆ ತನ್ನಾ ಜೆಜುನ್ “ತುಮಿ ಭಾಕ್ರಿಯಾನಾತ್ ಮನುನ್ ಕಶ್ಯಾಕ್ ಬೊಲುಲ್ಯಾಸಿ? ಅಜುನ್ ತುಮ್ಕಾ ಕಳುಕ್ ನಾ? ತುಮ್ಚಿ ಟಕ್ಲಿ ತೌಡಿಬಿ ಮಡ್ಡ್ ಹೊಲ್ಯಾತ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:17
17 ತಿಳಿವುಗಳ ಹೋಲಿಕೆ  

ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು