Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ಹ್ಯಾ ಲೊಕಾಕ್ನಿ ಬಗುನ್ ಮಾಕಾ ಪಾಪ್ ದಿಸುಕ್ ಲಾಗ್ಲಾ, ತಿನ್ ದಿಸಾ ಹೊಲಿ ಹಿ ಲೊಕಾ ಮಾಜ್ಯಾ ವಾಂಗ್ಡಾ ಹಾತ್, ತೆಂಚ್ಯಾಕ್ಡೆ ಜೆವ್ನಾಕ್ ಕಾಯ್ಬಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:2
23 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು.


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.


ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.


ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು