Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:25 - ಕನ್ನಡ ಸತ್ಯವೇದವು C.L. Bible (BSI)

25 ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಅನಿ ಎಗ್ದಾ ಅಪ್ಲೊ ಹಾತ್ ತೆಚ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್. ತೆಕಾ ಬರೆ ದಿಸುಕ್ ಲಾಗ್ಲೆ ತೆಚೆ ಡೊಳೆ ಸಮಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:25
9 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ಆಗ ಅವನು ಕಣ್ಣೆತ್ತಿ ನೋಡಿ, “ನನಗೆ ಮನುಷ್ಯರು ಮರಗಳಂತೆ ಕಾಣಿಸುತ್ತಾರೆ. ಆದರೂ ಅವರು ನಡೆದಾಡುತ್ತಿದ್ದಾರೆ,” ಎಂದನು.


ಅನಂತರ ಯೇಸು, “ನೀನು ಊರೊಳಗೆ ಹೋಗುವುದೇ ಬೇಡ,” ಎಂದು ಅವನಿಗೆ ಆಜ್ಞಾಪಿಸಿ, ಮನೆಗೆ ಕಳುಹಿಸಿಬಿಟ್ಟರು.


ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು