Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:33 - ಕನ್ನಡ ಸತ್ಯವೇದವು C.L. Bible (BSI)

33 ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಹಿಂತಿರುಗಿಕೊಂಡು ತನ್ನ ಶಿಷ್ಯರನ್ನು ನೋಡಿ ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಗದರಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ಜೆಜುನ್ ಶಿಸಾಂಚ್ಯಾಕ್ಡೆ ಪರ್ತುನ್ ಪೆದ್ರುಕ್ “ಮಾಜ್ಯಾಕ್ನಾ ಧುರ್ ಚಲ್ ಸೈತಾನಾ! ತಿಯಾ ಮಾನ್ಸಾನ್ ಯೆವಜಲ್ಲ್ಯಾ ಬಾಸೆನ್ ಯೆವಜ್ತೆ, ದೆವಾನ್ ಯವಜಲ್ಲ್ಯಾ ಬಾಸೆನ್ ಯೆವ್ಜುನ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:33
24 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.


“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು