ಮಾರ್ಕ 9:14 - ಕನ್ನಡ ಸತ್ಯವೇದವು C.L. Bible (BSI)14 ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ಹುರಲ್ಲ್ಯಾ ಶಿಸಾತ್ನಿ ಯೆವ್ನ್ ಮಿಳ್ತಾನಾ ತ್ಯಾ ಶಿಸಾಂಚ್ಯಾ ಭೊತ್ಯಾನಿ ಲೈ ಲೊಕಾಂಚೊ ತಾಂಡೊ ಜಮಲ್ಲೊ ಅನಿ ಖಾಯ್ದೆ ಶಿಕ್ವುತಲೆ ತೆಂಚ್ಯಾಕ್ಡೆ ವಾದ್ ಕರುನ್ಗೆತ್ ಹೊತ್ತೆ. ಅಧ್ಯಾಯವನ್ನು ನೋಡಿ |