Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:18 - ಕನ್ನಡ ಸತ್ಯವೇದವು C.L. Bible (BSI)

18 ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ಗಿರೊ ತೆಕಾ ಅಂಗಾತ್ ಚಡಲ್ಲ್ಯಾ ತನ್ನಾ ತೆಕಾ ಜಿಮ್ನಿಕ್ ಪಾಡ್ವುತಾ, ತೊ ತೊಂಡಾತ್ನಾ ಫೆನ್ ಕಾಡ್ತಾ ಅನಿ ಕಟ್ಕಟ್ ದಾತಾ ಚಾವ್ತಾ, ತೆಚೆ ಆಂಗ್ ಶೆಡ್ದುನ್ ಘಟ್ ಹೊತಾ. ತ್ಯಾ ಗಿರ್‍ಯಾಕ್ ಕಾಡಾ ಮನುನ್ ತುಜ್ಯಾ ಶಿಸಾಕ್ನಿ ಮಿಯಾ ಸಾಂಗ್ಲೊ, ಖರೆ ತೆ ತೆಂಚೆನ್ ಹೊವ್ಕ್ ನಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:18
16 ತಿಳಿವುಗಳ ಹೋಲಿಕೆ  

ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.


ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.


ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.


ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.


ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು