Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:22 - ಕನ್ನಡ ಸತ್ಯವೇದವು C.L. Bible (BSI)

22 ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ಲೈಂದಾ ತ್ಯಾ ಗಿರ್‍ಯಾನ್ ತೆಚೊ ಜಿವ್ ಕಾಡುಸಾಟಿ ಮನುನ್ ಆಗಿತ್, ಪಾನಿಯಾತ್ ನ್ಹೆವ್ನ್ ಪಾಡ್ವುಕ್ ಕಸ್‍ರತ್ ಕರಲ್ಲೆ ಹಾಯ್, ದಯಾ ಕರುನ್ ತುಕಾ ಸಾದ್ಯ್ ಹೊಲ್ಯಾರ್ ಅಮ್ಕಾ ಮಜತ್ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:22
12 ತಿಳಿವುಗಳ ಹೋಲಿಕೆ  

ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು.


ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


“ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.


ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು